Titus 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನ್ನ ಬಳಿಗೆ ಅರ್ತೆಮನನ್ನು ಮತ್ತು ತುಖಿಕನನ್ನು ಕಳುಹಿಸಿದಾಗ, ನಿಕೊಪೊಲಿಯಲ್ಲಿರುವ ನನ್ನ ಬಳಿಗೆ ಬರಲು ಆದಷ್ಟು ಪ್ರಯತ್ನಿಸು. ನಾನು ಈ ಚಳಿಗಾಲವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
Kannada BSI Bible 2016
ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನಮಾಡು.
Kannada Bible (KNCL) BSI 2016
ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಅರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ.