Titus 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
Kannada BSI Bible 2016
ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.
Kannada Bible (KNCL) BSI 2016
ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.