Titus 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
Kannada BSI Bible 2016
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.
Kannada Bible (KNCL) BSI 2016
ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.