Titus 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮೂಲಕ ದೇವರು ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.
Kannada BSI Bible 2016
ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಯನ್ನು ಪಡೆದು ಅದಕ್ಕೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು. ಇದು ನಂಬತಕ್ಕ ಮಾತಾಗಿದೆ;
Kannada Bible (KNCL) BSI 2016
ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.