Titus 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
Kannada BSI Bible 2016
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
Kannada Bible (KNCL) BSI 2016
ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.