Zechariah 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನ ದೂತನೊಂದಿಗೆ ಆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
Kannada BSI Bible 2016
ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ - ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ; ಇಗೋ, ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ ಎಂದು ಅರಿಕೆಮಾಡಿದರು.
Kannada Bible (KNCL) BSI 2016
ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, “ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ,” ಎಂದನು.