Zechariah 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
Kannada BSI Bible 2016
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು
Kannada Bible (KNCL) BSI 2016
ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.