Zechariah 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೀಯೋನನ್ನು ನಾನು ಸಂತೈಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
Kannada BSI Bible 2016
ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಮ್ಮೆ ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
Kannada Bible (KNCL) BSI 2016
“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”