Zechariah 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.