Zechariah 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, ‘ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
Kannada BSI Bible 2016
ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ [ಕನಸಿನ ಅರ್ಥವನ್ನು] ವಿವರಿಸುವ ದೇವದೂತನನ್ನು - ಸ್ವಾಮೀ, ಇವರು ಯಾರು ಎಂದು ನಾನು ಕೇಳಲು ಅವನು ನನಗೆ - ಇವರು ಇಂಥವರೆಂದು ನಿನಗೆ ತೋರಿಸುವೆನು ಎಂಬದಾಗಿ ಹೇಳಿದನು.
Kannada Bible (KNCL) BSI 2016
ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.