Zechariah 10:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
Kannada BSI Bible 2016
ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
Kannada Bible (KNCL) BSI 2016
ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.