Zechariah 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.
Kannada BSI Bible 2016
ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.
Kannada Bible (KNCL) BSI 2016
ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.