Zechariah 10:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
Kannada BSI Bible 2016
ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
Kannada Bible (KNCL) BSI 2016
ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.