Zechariah 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;
Kannada BSI Bible 2016
ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು ಕನಿಕರವೆಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು.
Kannada Bible (KNCL) BSI 2016
ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು.