Zechariah 11:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.
Kannada BSI Bible 2016
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.
Kannada Bible (KNCL) BSI 2016
ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.