Zechariah 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.
Kannada BSI Bible 2016
ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ನಾನು - ನಿಮಗೆ ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ, ಇಲ್ಲವಾದರೆ ಬಿಡಿರಿ ಅನ್ನಲು ಅವರು ಮೂವತ್ತು ತೊಲ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.
Kannada Bible (KNCL) BSI 2016
ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.