Zechariah 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.
Kannada BSI Bible 2016
ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟಡವಿಯು ಪಾಳಾಗಿದೆ.
Kannada Bible (KNCL) BSI 2016
ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.