Zechariah 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, “ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”
Kannada BSI Bible 2016
ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ.
Kannada Bible (KNCL) BSI 2016
ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.