Zechariah 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”
Kannada BSI Bible 2016
ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
(ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).
Kannada Bible (KNCL) BSI 2016
ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”