Zechariah 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.
Kannada BSI Bible 2016
ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.
Kannada Bible (KNCL) BSI 2016
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.