Zechariah 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
Kannada BSI Bible 2016
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -
Kannada Bible (KNCL) BSI 2016
ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,