Zechariah 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
Kannada BSI Bible 2016
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
Kannada Bible (KNCL) BSI 2016
“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.