Zechariah 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.
Kannada BSI Bible 2016
ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಗಿದ್ದೋವಿನ ತಗ್ಗಿನೊಳಗೆ ಹದದ್‍ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.
Kannada Bible (KNCL) BSI 2016
ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.