Zechariah 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
Kannada BSI Bible 2016
ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
Kannada Bible (KNCL) BSI 2016
ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.