Zechariah 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.
Kannada BSI Bible 2016
ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.
Kannada Bible (KNCL) BSI 2016
ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.