Zechariah 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಒಬ್ಬ ಬಲಹೀನ ಮನಷ್ಯನೂ ದಾವೀದನಂತೆ ಶೂರನಾಗುವನು. ಮತ್ತು ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
Kannada BSI Bible 2016
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.
Kannada Bible (KNCL) BSI 2016
ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.