Zechariah 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
Kannada BSI Bible 2016
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
Kannada Bible (KNCL) BSI 2016
ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.