Zechariah 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.
Kannada BSI Bible 2016
ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.
Kannada Bible (KNCL) BSI 2016
ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.