Zechariah 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
Kannada BSI Bible 2016
ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
Kannada Bible (KNCL) BSI 2016
ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.