Zechariah 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
Kannada BSI Bible 2016
ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ.
Kannada Bible (KNCL) BSI 2016
ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.