Zechariah 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
Kannada BSI Bible 2016
ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.
Kannada Bible (KNCL) BSI 2016
ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.