Zechariah 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
Kannada BSI Bible 2016
ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.
Kannada Bible (KNCL) BSI 2016
ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.