Zechariah 14:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
Kannada BSI Bible 2016
ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ.
Kannada Bible (KNCL) BSI 2016
ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.