Zechariah 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
Kannada BSI Bible 2016
ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ ಕುಲದವರು ಹೊರಟು ಬಾರದಿದ್ದರೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವದು.
Kannada Bible (KNCL) BSI 2016
ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.