Zechariah 14:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.
Kannada BSI Bible 2016
ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.
Kannada Bible (KNCL) BSI 2016
ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.