Zechariah 14:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
Kannada BSI Bible 2016
ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.
Kannada Bible (KNCL) BSI 2016
ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.