Zechariah 14:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವಿ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವಿ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
Kannada BSI Bible 2016
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.
Kannada Bible (KNCL) BSI 2016
ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.