Zechariah 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
Kannada BSI Bible 2016
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವಾಸ್ತ್ಯವನ್ನಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
Kannada Bible (KNCL) BSI 2016
ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.