Zechariah 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
Kannada BSI Bible 2016
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.
Kannada Bible (KNCL) BSI 2016
“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.