Zechariah 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.”’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.
Kannada BSI Bible 2016
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.
Kannada Bible (KNCL) BSI 2016
ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.