Zechariah 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
Kannada BSI Bible 2016
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.
Kannada Bible (KNCL) BSI 2016
ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.