Zechariah 2:7 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ. ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ಆ ನಗರದಿಂದ ಓಡಿಹೋಗಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
Kannada BSI Bible 2016
ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ, ಬಾಬೆಲ್‍ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಚೀಯೋನೇ, ಬನ್ನಿರಿ, ಬಾಬಿಲೋನಿನ ಪುತ್ರಿಯ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.”