Zechariah 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -
Kannada Bible (KNCL) BSI 2016
ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.