Zechariah 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು. ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
Kannada BSI Bible 2016
ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.