Zechariah 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
Kannada BSI Bible 2016
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
Kannada Bible (KNCL) BSI 2016
ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.