Zechariah 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”
Kannada BSI Bible 2016
ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.
Kannada Bible (KNCL) BSI 2016
ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”