Zechariah 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.
Kannada BSI Bible 2016
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.
Kannada Bible (KNCL) BSI 2016
ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.