Zechariah 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವಿ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವಿ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.
Kannada Bible (KNCL) BSI 2016
“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’