Zechariah 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
Kannada BSI Bible 2016
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.
Kannada Bible (KNCL) BSI 2016
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.