Zechariah 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
Kannada BSI Bible 2016
ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
Kannada Bible (KNCL) BSI 2016
“ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.